ಕಂದಾಯ ಇಲಾಖೆಗೆ ಹೈಟೆಕ್ ಸ್ಪರ್ಶ: ಜನರಿಗೆ ಅನುಕೂಲ ಕಲ್ಪಿಸಲು ಕ್ರಮ

ಬೆಳಗಾವಿ: ಕಂದಾಯ ಇಲಾಖೆಗೆ ಹೈಟೆಕ್ ಸ್ಪರ್ಶ ನೀಡಲಾಗುವುದು. ಜನರಿಗೆ ಆಗುತ್ತಿರುವ ತೊಂದರೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆಗೆ ಸಂಬಂಧಿಸಿದ ಪ್ರಕರಣಗಳನ್ನು 90 ದಿನಗಳಲ್ಲಿ ಇತ್ಯಂರ್ಥಪಡಿಸಲಾಗುವುದು. ಈ ನಿಟ್ಟಿನಲ್ಲಿ ಪ್ರತಿ ತಿಂಗಳು ಪರಿಶೀಲನಾ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಇಲಾಖೆಯಲ್ಲಿ ಈಗಲೂ ಹಳೆಯ ಪದ್ಧತಿ ಅನುಸರಿಸಲಾಗುತ್ತಿದೆ. ಇದರಿಂದಾಗಿ ಲಕ್ಷಗಟ್ಟಲೆ ಪ್ರಕರಣಗಳು ಬಾಕಿ ಇದ್ದು, ಕಂದಾಯ ಇಲಾಖೆ ಇಡೀ ವ್ಯವಸ್ಥೆಗೆ ಕೊಂಡಿಯಾಗಿದ್ದು, ಇದನ್ನು ಸರಳೀಕರಣಗೊಳಿಸಿ ಜನರಿಗೆ ಆಗುತ್ತಿರುವ ತೊಂದರೆ ನಿವಾರಿಸಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read