HomeKarnatakaಸಿಎಂ ಸ್ಥಾನಕ್ಕೆ ಯಾರ್ಯಾರು ಪ್ರಯತ್ನಿಸುತ್ತಿದ್ದಾರೆ ಅದು ಅವರ ವೈಯಕ್ತಿಕ ವಿಚಾರ; ಬದಲಾವಣೆ ಚರ್ಚೆ ಪಕ್ಷದಲ್ಲಿ ನಡೆದಿಲ್ಲ...

ಸಿಎಂ ಸ್ಥಾನಕ್ಕೆ ಯಾರ್ಯಾರು ಪ್ರಯತ್ನಿಸುತ್ತಿದ್ದಾರೆ ಅದು ಅವರ ವೈಯಕ್ತಿಕ ವಿಚಾರ; ಬದಲಾವಣೆ ಚರ್ಚೆ ಪಕ್ಷದಲ್ಲಿ ನಡೆದಿಲ್ಲ ಎಂದ ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಕಾಂಗ್ರೆಸ್ ಪಕ್ಷದ ಹಂತದಲ್ಲಿ ಸಿಎಂ ಬದಲಾವಣೆ ಚರ್ಚ್ಹೆಯೇ ನಡೆದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ಮುಖ್ಯಮಂತ್ರಿ ಸ್ಥಾನಕ್ಕಾಗಿ ಯಾರ್ಯಾರು ಪ್ರಯತ್ನ ಮಾಡುತ್ತಿದ್ದಾರೆ ಅದು ಅವರ ವೈಯಕ್ತಿಕ ವಿಚಾರ. ನಮ್ಮ ಪಕ್ಷದ ಹಂತದಲ್ಲಿ ಸಿಎಂ ಬದಲಾವಣೆ ಚರ್ಚೆ ನಡೆದಿಲ್ಲ ಎಂದರು.

ಹೈಕಮಾಂಡ್ ನಿಂದ ಹಿಡಿದು ಎಲ್ಲರೂ ಸಿಎಂ ಸಿದ್ದರಾಮಯ್ಯ ಬೆನ್ನಗೆ ನಿಂತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್ ಎಲ್ಲರೂ ನಾವು ಸಿಎಂ ದ್ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದೇವೆ ಎಂದು ನಮಗೆ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾಗಿ ಸಿಎಂ ಬದವಾಣೆ ಎನ್ನುವುದು ಕೇವಲ ಊಹಾಪೋಹ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular