BIG NEWS: ಶ್ರೀ ಕೃಷ್ಣ ಜನ್ಮಾಷ್ಟಮಿ: ಬೆಂಗಳೂರಿನ ಈ ರಸ್ತೆಗಳಲ್ಲಿ ಎರಡು ದಿನ ಸಂಚಾರ ಬಂದ್

ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಎರಡು ದಿನ ವಾಹನ ಸಂಚಾರ ಬಂದ್ ಆಗಲಿದೆ. ಈ ಹಿನ್ನೆಲೆಯಲ್ಲಿ ಬದಲಿ ಮಾರ್ಗ ಅನುಸರಿಸುವಂತೆ ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಆಗಸ್ಟ್ 26 ಮತ್ತು 27 ರಂದು ಬೆಂಗಳೂರು ನಗರದ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಸಂಚಾರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.

ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ದೇವಸಂದ್ರ ಮುಖ್ಯರಸ್ತೆಯಲ್ಲಿರುವ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ರಥೋತ್ಸವಿದೆ. ಹೀಗಾಗಿ ಈ ಮಾರ್ಗದಲ್ಲಿ ಭಾರಿ ಸಂಚಾರ ದಟ್ಟಣೆ ಸಾಧ್ಯತೆ ಇದೆ. ಈ ಈ ನಿಟ್ಟಿನಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ದೇವಸಂದ್ರ ಮುಖ್ಯರಸ್ತೆಯಲ್ಲಿ ವಾಹನ ಸಂಚಾರವನ್ನು ಸೋಮವಾರ ಬೆಳಗ್ಗೆ 8 ರಿಂದ ಮಂಗಳವಾರ ಬೆಳಗ್ಗೆ 6 ಗಂಟೆವರೆಗೆ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗ:
ಕೊಡಿಗೇಹಳ್ಳಿ ಮತ್ತು ಹೂಡಿ ಮುಖ್ಯರಸ್ತೆ ಕಡೆಯಿಂದ ದೇವಸಂದ್ರ ಮತ್ತು ಕೆ.ಆರ್.ಪುರ ಮಾರ್ಕೇಟ್ ಕಡೆಗೆ ಸಂಚರಿಸುವ ವಾಹನ ಸವಾರರು ಜೈ ಭುವನೇಶ್ವರಿ ಜಂಕ್ಷನ್ ಲುಲೂಸ್ ಬೇಕರಿ ಹತ್ತಿರ ಬಲ ತಿರುವು ಪಡೆದು ಆಯ್ಕೆಪ್ಪನಗರ ಮುಖ್ಯರಸ್ತೆ – ಬಸವನಪುರ ಮುಖ್ಯರಸ್ತೆ ಭಟ್ಟರಹಳ್ಳಿ ಜಂಕ್ಷನ್ ಮೂಲಕ ಕೆ.ಆರ್.ಪುರ ಮಾರ್ಕೇಟ್ ಕಡೆಗೆ ಸಂಚರಿಸಬಹುದು.

ಕೆ.ಆರ್.ಪುರ ಮಾರ್ಕೇಟ್ ಕಡೆಯಿಂದ ಕೊಡಿಗೇಹಳ್ಳಿ ಮತ್ತು ಹೂಡಿ ಮುಖ್ಯರಸ್ತೆ ಕಡೆಗೆ ಸಂಚರಿಸುವ ವಾಹನ ಸವಾರರು ಜಿ.ಆರ್.ಟಿ. ಹತ್ತಿರ ಬಲ ತಿರುವು ಪಡೆದು ಬಸವನಪುರ ಮುಖ್ಯರಸ್ತೆಯಲ್ಲಿ (ಕೃಷ್ಣ ಟಾಕೀಸ್ ರಸ್ತೆ) ಸಂಚರಿಸಿ ಭಟ್ಟರಹಳ್ಳಿ ಜಂಕ್ಷನ್ ಮೂಲಕ ಮಂದೆ ಸಂಚರಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read