ಬೆಂಗಳೂರು : ಜಮೀನು ಕಳೆದುಕೊಳ್ಳುವ ರೈತರಿಗೆ ನ್ಯಾಯಯುತವಾದ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸಂತ್ರಸ್ತರಿಗೆ ಸೂಕ್ತ ಪುನರ್ವಸತಿಯನ್ನು ಸಹ ಕಲ್ಪಿಸಲಾಗುವುದು. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಯೋಜನೆ ಅನುಷ್ಠಾನಕ್ಕೆ ಆರಂಭದಲ್ಲಿ ರೂ. 51,148 ಕೋಟಿ ಯೋಜನಾ ಮೊತ್ತ ಅಂದಾಜಿಸಲಾಗಿತ್ತು. ಈಗ ಪರಿಷ್ಕೃತ ರೂ. 87,818 ಕೋಟಿ ಅಂದಾಜಿಸಲಾಗಿದೆ. ಇದರಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಆರಂಭದಲ್ಲಿ ರೂ.17,627 ಕೋಟಿ ಎಂದು ಅಂದಾಜಿಸಲಾಗಿತ್ತು. ಪ್ರಸ್ತುತ ಪರಿಷ್ಕೃತ ಮೊತ್ತ ರೂ. 40,557.09 ಕೋಟಿ ಆಗಲಿದೆ ಎಂದು ಅಂದಾಜಿಸಲಾಗಿದೆ.
ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವುದು ನಮ್ಮ ಸರ್ಕಾರದ ವಾಗ್ದಾನವಾಗಿದೆ. ಇದಕ್ಕಾಗಿ ಆದಷ್ಟು ಬೇಗ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ನಮ್ಮ ಪಾಲಿನ ನೀರಿನ ಸದ್ಬಳಕೆ ಮಾಡಿಕೊಳ್ಳಲು ನಾವು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜಮೀನು ಕಳೆದುಕೊಳ್ಳುವ ರೈತರಿಗೆ ನ್ಯಾಯಯುತವಾದ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ. ಸಂತ್ರಸ್ತರಿಗೆ ಸೂಕ್ತ ಪುನರ್ವಸತಿಯನ್ನು ಸಹ ಕಲ್ಪಿಸಲಾಗುವುದು. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.
— Siddaramaiah (@siddaramaiah) September 11, 2025
ಯೋಜನೆ ಅನುಷ್ಠಾನಕ್ಕೆ ಆರಂಭದಲ್ಲಿ ರೂ. 51,148 ಕೋಟಿ ಯೋಜನಾ ಮೊತ್ತ ಅಂದಾಜಿಸಲಾಗಿತ್ತು. ಈಗ ಪರಿಷ್ಕೃತ ರೂ.… pic.twitter.com/11rnhhZ09e