ಬೆಂಗಳೂರು: ಕಂದಾಯ ಸಚಿವ ಕೃಷ್ಣಬೈರೇಗೌಡ ಜನಸಾಮಾನ್ಯರಂತೆ ಬಸ್ ನಲ್ಲಿ ಪ್ರಯಾಣಿಸಿ ಗಮನ ಸೆಳೆದಿದ್ದಾರೆ.
ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಕಂದಾಯ ಸಚಿವರ ದಕ್ಷತೆ, ಪ್ರಾಮಾಣಿಕತೆ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದರು. ಇದೀಗ ಸಚಿವರು ಜನಸಾಮಾನ್ಯರಂತೆ ಊರಿಂದ ಊರಿಗೆ ಬಸ್ ನಲ್ಲಿ ಪ್ರಯಾಣಿಸುವ ಮೂಲಕ ಸಚಿವರ ಸರಳತೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಚಿವ ಕೃಷ್ಣಬೈರೇಗೌಡ ಬೆಂಗಳೂರಿನಿಂದ ವಿಜಯಪುರಕ್ಕೆ ಬಸ್ ನಲ್ಲಿ ಪ್ರಯಾಣಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಲ್ಯಾಣರಥ ಬಸ್ಸಿನಲ್ಲಿ ಪ್ರಯಾಣಿಸಿ ತಮ್ಮ ಸರಳತೆ ಬಗ್ಗೆ ಗಮನ ಸೆಳೆದಿದ್ದಾರೆ.