BREAKING NEWS: ರಾಜ್ಯ ಸರ್ಕಾರವನ್ನು ಬುಡಮೇಲು ಮಾಡುವ ಯತ್ನ; ವಾಲ್ಮೀಕಿ ಹಗರಣದಲ್ಲಿ ಷಡ್ಯಂತ್ರ; ಸಚಿವ ಕೃಷ್ಣಬೈರೇಗೌಡ ಸ್ಫೋಟಕ ಹೇಳಿಕೆ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸೋಲಿನಿಂದ ಹತಾಶರಾಗಿರುವ ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಬುಡಮೇಲು ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ನಾಲ್ವರು ಸಚಿವರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ವಾಲ್ಮೀಕಿ ಹಗರಣದಲ್ಲಿ ಷಡ್ಯಂತ್ರ ನಡೆಸಲಾಗುತ್ತಿದೆ. ವಿಚಾರಣೆ ವೇಳೆ ಬಲವಂತದ ಹೇಳಿಕೆಗಳನ್ನು ಹೇಳಿಸಲಾಗುತ್ತಿದೆ. ಸರ್ಕಾರದ ಪ್ರಮುಖರ ಹೆಸರನ್ನು ಹೇಳುವಂತೆ ಒತ್ತಡ ಹೇಕಲಾಗಿದೆ. ಇಲ್ಲದಿದ್ದರೆ ಇಡಿ ಪವರ್ ಏನು ಅಂತ ತೋರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿದರು.

ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಡೆಯಾಗಿದ್ದಕ್ಕೆ ಆಡಳಿತ ಪಕ್ಷವನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ಐಟಿ ಇಡಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ವಿಪಕ್ಷಗಳ ಸರ್ಕಾರಗಳು ಇರುವ ರಾಜ್ಯಗಳ ಮೇಲೆ ಇಡಿ, ಐಟಿ ದಾಳಿ ನಡೆದಿದೆ. ಕರ್ನಾಟಕದಲ್ಲಿ ಸರ್ಕಾರವನ್ನು ಬುಡಮೇಲು ಮಾಡುವ ಯತ್ನ ನಡೆದಿದೆ ಎಂದು ವಾಗ್ದಾಳಿ ನಡೆಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read