HomeKarnatakaBREAKING: ಬೆಂಗಳೂರಿನಲ್ಲಿ ಟೋಯಿಂಗ್ ಗೆ ಚಾಲನೆ: ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ದರೆ ವಾಹನ ಹರಾಜು: ಸಚಿವ...

BREAKING: ಬೆಂಗಳೂರಿನಲ್ಲಿ ಟೋಯಿಂಗ್ ಗೆ ಚಾಲನೆ: ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ದರೆ ವಾಹನ ಹರಾಜು: ಸಚಿವ ಕೃಷ್ಣಬೈರೇಗೌಡ ಎಚ್ಚರಿಕೆ

ಬೆಂಗಳೂರು: ರಸ್ತೆಗಳಲ್ಲಿ ಎಂದರಲ್ಲಿ, ಪಾದಚಾರಿ ಮಾರ್ಗಗಳಲ್ಲಿ ಅನಾಥವಾಗಿ ನಿಲ್ಲಿಸಿದ್ದ ವಾಹನಗಳನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದ್ದಾರೆ.

ಮಲ್ಲೇಶ್ವರಂನ ಎಂ.ಡಿ.ಬ್ಲಾಕ್‌ನಲ್ಲಿ ಈ ಕಾರ್ಯಾಚರಣೆಗೆ ಸಚಿವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಜಿಬಿಎ ಮತ್ತು ಸಂಚಾರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಬೆಂಗಳೂರಿನಲ್ಲಿ 2,700 ಅನಾಥ ವಾಹನಗಳನ್ನು ಪಟ್ಟಿ ಮಾಡಿದ್ದೇವೆ. ಒಂದು ವಾರದ ಮೊದಲು ಇಂತಹ ವಾಹನಗಳಿಗೆ ನೋಟಿಸ್‌ಗಳನ್ನು ಅಂಟಿಸಲಾಗಿತ್ತು. ನೋಟಿಸ್ ನೀಡಿದ ನಂತರವೂ ಮಾಲೀಕರು ಬಂದು ವಾಹನಗಳನ್ನು ಕ್ಲೈಮ್ ಮಾಡದಿದ್ದರೆ, ಅವುಗಳನ್ನು ಟೋಯಿಂಗ್ ಮಾಡಲಾಗುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟೋಯಿಂಗ್ ಮಾಡಿದ ವಾಹನಗಳನ್ನು ಜಿಬಿಎ ಜಾಗದಲ್ಲಿ 15 ದಿನಗಳ ಕಾಲ ಇರಿಸಲಾಗುವುದು. ಈ ಅವಧಿಯಲ್ಲಿಯೂ ಮಾಲೀಕರು ಬರದಿದ್ದರೆ, ಕಾನೂನು ಪ್ರಕಾರವಾಗಿ ವಾಹನಗಳನ್ನು ಹರಾಜು ಪ್ರಕ್ರಿಯೆ ಮೂಲಕ ಮಾರಾಟ ಮಾಡಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರು ರಸ್ತೆಗಳನ್ನು ಮತ್ತು ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಬಾರದು. ವಾಹನಗಳನ್ನು ರಸ್ತೆಗಳಲ್ಲಿ ಎಲ್ಲೆಂದರಲ್ಲಿ ನಿಲ್ಲಿಸಿ ಬೆಂಗಳುರು ನಗರವನ್ನು ಹಾಳುಮಾಡಬಾರದು. ಈ ಬಗ್ಗೆ ಜನರು ಗಮನಹರಿಸಬೇಕು ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular