HomeEntertainment'ಕೃಷ್ಣಂ ಪ್ರಣಯ ಸಖಿ' ಚಿತ್ರದ ''ದ್ವಾಪರ'' ಹಾಡು ರಿಲೀಸ್

‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ”ದ್ವಾಪರ” ಹಾಡು ರಿಲೀಸ್

ಶ್ರೀನಿವಾಸ್ ರಾಜು ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ”ದ್ವಾಪರ” ಎಂಬ ಲಿಂಕಲ್ ಹಾಡು ನಿನ್ನೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿದೆ. ಸರಿಗಮಪ ಖ್ಯಾತಿಯ ಜಸ್ಕರನ್ ಸಿಂಗ್ ಈ ಈ ಹಾಡಿಗೆ ಧ್ವನಿಯಾಗಿದ್ದು, ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಇನ್ನುಳಿದಂತೆ ಡಾ. ವಿ ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯವಿದೆ.

ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಮಾಳವಿಕಾ ನಾಯರ್ ಪ್ರಮುಖ ಪಾತ್ರದಲ್ಲಿದ್ದು, ತ್ರಿಶೂಲ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನ, ವೆಂಕಟ್ ರಾಮ್ ಪ್ರಸಾದ್ ಛಾಯಾಗ್ರಹಣ, ಶಿವ ಸಾಯಿ ಹಾಗೂ ವಿಜಯ್ ಈಶ್ವರ್ ಅವರ ಸಂಭಾಷಣೆ, ಹಾಗೂ ಶೇಖರ್ ನೃತ್ಯ ನಿರ್ದೇಶನವಿದೆ.

For Latest News Updates, Join Our Whatsapp Community🚩
RELATED ARTICLES

Most Popular