ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಇದೇ ವರ್ಷ ಆಗಸ್ಟ್ 15ರಂದು ಬಿಡುಗಡೆಯಾಗಿ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರ ಈಗಾಗಲೇ ನೂರು ದಿನಗಳ ಯಶಸ್ವಿ ಪ್ರದರ್ಶನ ಕಾಣುವ ಮೂಲಕ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿದೆ. ‘ಕೃಷ್ಣಂ ಪ್ರಣಯ ಸಖಿ’ ಇದೇ ಜನವರಿ 12ರಂದು ಮೊಟ್ಟಮೊದಲ ಬಾರಿಗೆ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ. ಜನಪ್ರಿಯ ವಾಹಿನಿಯಾದ ಉದಯ ಟಿವಿಯಲ್ಲಿ ಇದನ್ನು ವೀಕ್ಷಿಸಬಹುದಾಗಿದೆ.
ಈ ಚಿತ್ರವನ್ನು ಶ್ರೀನಿವಾಸ ರಾಜು ನಿರ್ದೇಶದ್ದು, ತ್ರಿಶೂಲ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಪ್ರಶಾಂತ ಜಿ ರುದ್ರಪ್ಪ ನಿರ್ಮಾಣ ಮಾಡಿದ್ದಾರೆ. ಗಣೇಶ್, ಮಾಳವಿಕಾ ನಾಯರ್ ಮತ್ತು ಶರಣ್ಯ ಶೆಟ್ಟಿ ಪ್ರಮುಖ ಪಾತ್ರದಲ್ಲಿದ್ದು, ಸಾಧು ಕೋಕಿಲ, ರಂಗಾಯಣ ರಘು, ಶಶಿಕುಮಾರ್, ರಾಮಕೃಷ್ಣ, ಕುರಿ ಪ್ರತಾಪ್, ರುಕ್ಮಿಣಿ ಕೃಷ್ಣ ನಟಿಸಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಕೆಎಂ ಪ್ರಕಾಶ್ ಸಂಕಲನ, ಹಾಗೂ ವೆಂಕಟರಾಮಪ್ರಸಾದ್ ಛಾಯಾಗ್ರಹಣವಿದೆ.