ಕೆಆರ್‌ಎಸ್‌ ಬೃಂದಾವನದಲ್ಲಿ ಸೆ. 26ರಿಂದ 5 ದಿನ ಕಾವೇರಿ ಆರತಿ: ಸಿದ್ಧತೆ ಪರಿಶೀಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ಕೆಆರ್‌ಎಸ್‌ನ ಬೃಂದಾವನದಲ್ಲಿ ಸೆಪ್ಟೆಂಬರ್‌ 26ರಿಂದ 5 ದಿನಗಳ ಕಾಲ ನಡೆಯಲಿರುವ ಕಾವೇರಿ ಆರತಿಯ ಸ್ಥಳ ಹಾಗೂ ಸಿದ್ಧತಾ ಕಾರ್ಯಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರಿಶೀಲಿಸಿದ್ದಾರೆ.

ಬೃಂದಾವನದ ದೋಣಿ ವಿಹಾರ ಕೇಂದ್ರದಲ್ಲಿರುವ ಚಿಕ್ಕ ಕಾವೇರಿ ಪ್ರತಿಮೆಯ ಮುಂಭಾಗದಲ್ಲಿ ಕಾವೇರಿ ಆರತಿ ಕಾರ್ಯಕ್ರಮಗಳು ನಡೆಯಲಿವೆ. ಹೀಗಾಗಿ ಕಾವೇರಿ ಆರತಿಯ ಸ್ಥಳ, ಮನರಂಜನೆಯ ವೇದಿಕೆ, ವೀಕ್ಷಕರಿಗೆ ಆಸನ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿ, ಕಾರ್ಯಕ್ರಮ ಯಾವುದೇ ಲೋಪವಿಲ್ಲದೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಳಿಕ ಬೆಂಗಳೂರು ನಗರ ನೀರು ಸರಬರಾಜು ಹಾಗೂ ಒಳಚರಂಡಿ‌ ಮಂಡಳಿ ಆಯುಕ್ತ ರಾಮ್ ಪ್ರಸಾದ್ ಮನೋಹರ್ ಅವರು‌ ಕಾವೇರಿ ಆರತಿಯ ರೂಪುರೇಷೆ ಕುರಿತು ವಿವರಿಸಿದರು.

ಇದೇ ವೇಳೆ ಕಾವೇರಿ ಆರತಿಯ ಪೂರ್ವ ತಾಲೀಮು ವೀಕ್ಷಿಸಲಾಗಿದ್ದು, ನೋಡಲು ಕಣ್ಮನಸೆಳೆಯುವಂತಿತ್ತು. ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಜಗತ್ತಿಗೆ ಸಾರುವುದರ ಜೊತೆಗೆ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸುವುದೇ ನಮ್ಮ ಗುರಿಯಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read