ಇದೇ ಮೊದಲ ಬಾರಿಗೆ ಜೂನ್ ನಲ್ಲೇ ಸಂಪೂರ್ಣ ಭರ್ತಿಯಾದ KRS ಡ್ಯಾಂ: ನಾಳೆ ‘ಕಾವೇರಿ’ಗೆ ಸಿಎಂ ಬಾಗಿನ ಅರ್ಪಣೆ

ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಕೆ.ಆರ್.ಎಸ್. ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿಗೆ ಬಾಗಿನ ಅರ್ಪಿಸಲಿದ್ದಾರೆ.

ನಾಳೆ ಬೆಳಗ್ಗೆ 11:30 ಅಭಿಜಿನ್ ಮುಹೂರ್ತದಲ್ಲಿ ಸಿಎಂ ಬಾಗಿನ ಅರ್ಪಿಸಲಿದ್ದಾರೆ. ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿವೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಬಾಗಿನ ಹಿನ್ನೆಲೆ ಕಾವೇರಿ ನೀರಾವರಿ ನಿಗಮದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಲಾಶಯದ ಮೇಲೆ ಕನ್ನಡದ ಬಾವುಟಗಳು ರಾರಾಜಿಸುತ್ತಿದೆ. ಬಾಗಿನ ಅರ್ಪಿಸಿದ ಬಳಿಕ ಸಿಎಂ ಕಾವೇರಿ ಮಾತೆಗೆ ಪೂಜೆ ಸಲ್ಲಿಸಲಿದ್ದಾರೆ. ಸಿಎಂ ಆಗಮನ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read