KRS ನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ

ಮಂಡ್ಯ: ಕೆ.ಆರ್.ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಯನ್ನು ಮುಂದೂಡಲಾಗಿದೆ. ನಾಲಾ ಆಧುನಿಕರಣ ಕಾಮಗಾರಿ ಹಿನ್ನೆಲೆಯಲ್ಲಿ ನೀರು ಬಿಡುಗಡೆ ವಿಳಂಬವಾಗುತ್ತಿದೆ ಎಂದು ತಿಳಿದುಬಂದಿದೆ.

ಜುಲೈ 10ರಿಂದ ನಾಲೆಗಳಿಗೆ ನೀರು ಹರಿಯುವ ಸಾಧ್ಯತೆ ಇದೆ. ಜುಲೈ 8ರ ಸಂಜೆಯಿಂದಲೇ ನೀರು ಬಿಡುಗಡೆ ಮಾಡುವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಜುಲೈ 8ರಿಂದ 15 ದಿನಗಳ ಕಾಲ ನೀರು ಬಿಡುಗಡೆ ಬಗ್ಗೆ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಆದರೆ ವಿಶ್ವೇಶ್ವರಯ್ಯ ನಾಲೆ ಆಧುನೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೀರು ಬಿಡುಗಡೆ ವಿಳಂಬವಾಗಿದೆ.

ಕಾಮಗಾರಿಯಿಂದಾಗಿ ನಾಲೆಯಲ್ಲಿ ನೀರು ಹರಿಯುವ ಸ್ಥಳಗಳಲ್ಲಿಯೇ ಯಂತ್ರೋಪಕರಣಗಳು ಇವೆ. ನಾಲೆಯಿಂದ ಯಂತ್ರೋಪಕರಣಗಳನ್ನು ತೆರವುಗೊಳಿಸಿ ಜುಲೈ 10ರಿಂದ ನೀರು ಬಿಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read