HomeKarnatakaBREAKING NEWS: ಕೆಆರ್ ಎಸ್ ಹಿನ್ನೀರಿನಲ್ಲಿ ದುರಂತ; ನೀರಿನಲ್ಲಿ ಮುಳುಗಿ ಮೂವರು ದುರ್ಮರಣ

BREAKING NEWS: ಕೆಆರ್ ಎಸ್ ಹಿನ್ನೀರಿನಲ್ಲಿ ದುರಂತ; ನೀರಿನಲ್ಲಿ ಮುಳುಗಿ ಮೂವರು ದುರ್ಮರಣ

ಶ್ರೀರಂಗಪಟ್ಟಣ: ಪ್ರವಾಸಕ್ಕೆಂದು ಬಂದವರು ಕೆಆರ್ ಎಸ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ.

ಹರೀಶ್, ನಂಜುಂಡ, ಜ್ಯೋತಿ ಮೃತರು ಎಂದು ಗುರುತಿಸಲಾಗಿದೆ. ನೀರಿನಲ್ಲಿ ಮುಳುಗಿದ್ದ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನೋರ್ವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಜೆ ಹಿನ್ನೆಲೆಯಲ್ಲಿ ಮೈಸೂರಿನ ಕಾರುಣ್ಯ ಟ್ರಸ್ಟ್ ನ 25 ಸಿಬ್ಬಂದಿಗಳು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಕೆಆರ್ ಎಸ್ ಜಲಾಶಯದ ಹಿನ್ನೀರಿನಲ್ಲಿ ಆಟವಾಡಲೆಂದು ಇಳಿದಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟಿದ್ದಾರೆ.

ಕೆಆರ್ ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular