HomeLatest NewsBREAKING: ಕೆ.ಆರ್.ಎಸ್ ಹಿನ್ನೀರಿನಲ್ಲಿ ಮುಳುಗಿ ನೀರು ಪಾಲಾಗಿದ್ದ ಮೂವರು ವಿದ್ಯಾರ್ಥಿಗಳ ಮೃತದೇಹ ಪತ್ತೆ

BREAKING: ಕೆ.ಆರ್.ಎಸ್ ಹಿನ್ನೀರಿನಲ್ಲಿ ಮುಳುಗಿ ನೀರು ಪಾಲಾಗಿದ್ದ ಮೂವರು ವಿದ್ಯಾರ್ಥಿಗಳ ಮೃತದೇಹ ಪತ್ತೆ

ಮೈಸೂರು: ಪ್ರವಾಸಕ್ಕೆ ಬಂದಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಕೆ.ಆರ್.ಎಸ್ ಹಿನ್ನೀರಿನಲ್ಲಿ ನೀರುಪಾಲಾಗಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿದೆ.

ಮೈಸೂರಿನ ಮೀನಾಕ್ಷಿಪುರದ ಕೆ.ಆರ್.ಎಸ್ ಹಿನ್ನೀರಿನಲ್ಲಿ ಈ ದುರಂತ ಸಂಭವಿಸಿದೆ. ವಿದ್ಯಾರ್ಥಿಗಳಾದ ಪ್ರಶಾಂತ್, ಸಿದ್ದೇಶ್ ಹಾಗೂ ಕೃಷ್ಣ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮೂವರು ವಿದ್ಯಾರ್ಥಿಗಳ ಮೃತದೇಹವನ್ನು ಹೊರತೆಗೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡ್ಯದ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೋಗಿದ್ದರು. ಈ ವೇಳೆ ಕೆ.ಆರ್.ಎಸ್ ಹಿನ್ನೀರಿನಲ್ಲಿ ಮುಳುಗಿ ದುರಂತ ಅಂತ್ಯ ಕಂಡಿದ್ದಾರೆ.

ಇಲವಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular