ಮೈಸೂರು: ಪ್ರವಾಸಕ್ಕೆ ಬಂದಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಕೆ.ಆರ್.ಎಸ್ ಹಿನ್ನೀರಿನಲ್ಲಿ ನೀರುಪಾಲಾಗಿರುವ ಘಟನೆ ಮೈಸೂರಿನ ಮೀನಾಕ್ಷಿಪುರದಲ್ಲಿ ನಡೆದಿದೆ.
ಮಂಡ್ಯದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಶಾಂತ್, ಸಿದ್ದ ಹಾಗೂ ಕೃಷ್ಣ ನೀರು ಪಾಲಾಗಿರುವ ವಿದ್ಯಾರ್ಥಿಗಳು. ಮೂವರು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಕೆ.ಆರ್. ಎಸ್ ಹಿನ್ನೀರಿಗೆ ಇಳಿದವರು ನೀರಿನಲ್ಲಿ ಮುಳುಗಿ ನೀರು ಪಾಲಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಲವಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.