HomeLatest NewsBIG NEWS: ಕೆ.ಆರ್.ಎಸ್ ಹಿನ್ನೀರಿನಲ್ಲಿ ದುರಂತ: ಪ್ರವಾಸಕ್ಕೆ ಬಂದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

BIG NEWS: ಕೆ.ಆರ್.ಎಸ್ ಹಿನ್ನೀರಿನಲ್ಲಿ ದುರಂತ: ಪ್ರವಾಸಕ್ಕೆ ಬಂದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಮೈಸೂರು: ಪ್ರವಾಸಕ್ಕೆ ಬಂದಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಕೆ.ಆರ್.ಎಸ್ ಹಿನ್ನೀರಿನಲ್ಲಿ ನೀರುಪಾಲಾಗಿರುವ ಘಟನೆ ಮೈಸೂರಿನ ಮೀನಾಕ್ಷಿಪುರದಲ್ಲಿ ನಡೆದಿದೆ.

ಮಂಡ್ಯದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಶಾಂತ್, ಸಿದ್ದ ಹಾಗೂ ಕೃಷ್ಣ ನೀರು ಪಾಲಾಗಿರುವ ವಿದ್ಯಾರ್ಥಿಗಳು. ಮೂವರು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಕೆ.ಆರ್. ಎಸ್ ಹಿನ್ನೀರಿಗೆ ಇಳಿದವರು ನೀರಿನಲ್ಲಿ ಮುಳುಗಿ ನೀರು ಪಾಲಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಲವಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular