HomeLatest Newsಕೆ.ಆರ್.ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಕೆ.ಆರ್.ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಮಂಡ್ಯ: ತಮಿಳುನಾಡಿಗೆ ನೀರು ಹರಿಸುವಂತೆ ಹೊರಡಿಸಿರುವ CWMA ಆದೇಶ ಖಂಡಿಸಿ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.​ಎಸ್​ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಮಾಜಿ ಸಿಎಂ ಬಿ;ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲವಿದೆ. ಜಲಾಶಯಗಳಲ್ಲಿ ನೀರಿಲ್ಲ. ರೈತರು ಬೆಳೆ ಬೆಳೆಯಲಾಗದೇ ಸಂಕಷ್ಟದಲ್ಲಿದ್ದಾರೆ. ಕುಡಿಯುವ ನೀರಿಗೂ ತತ್ವಾರ ಎದುರಾಗುತ್ತಿದೆ. ಇಂತಹ ಸಂದರ್ಭದಲ್ಲಿ CWMA ಆದೇಶ ಪಾಲಿಸಬೇಕೆಂಬ ಕಾರಣಕ್ಕೆ ತಮಿಳುನಾಡಿಗೆ ನೀರು ಬಿಡಲು ಸರ್ಕಾರ ಮುಂದಾಗಬಾರದು. ರಾಜ್ಯದ ಜನತೆಯ ಹಿತ ಕಾಯುವುದು ರಾಜ್ಯ ಸರ್ಕಾರದ ಕರ್ತವ್ಯ. ಒಂದೇ ಒಂದು ಹನಿ ನೀರು ಕೂಡ ತಮಿಳುನಾಡಿಗೆ ಹರಿಯಬಾರದು ಎಂದು ಎಚ್ಚರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ರೈತರ ಹಿತ ಕಾಯಲು ಸರ್ಕಾರ ಮುಂದಾಗಬೇಕು. ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು. ಈ ನಿಟ್ಟಿನಲ್ಲಿ ಸರ್ಕಾರ ಗಟ್ಟಿ ನಿರ್ಧಾರ ಕೈಗೊಳ್ಳಬೇಕು. ಸರ್ಕಾರದ ಜೊತೆ ನಾವು ನಿಲ್ಲುತ್ತೇವೆ ಎಂಬುದನ್ನು ತಿಳಿಸಲು ಇದೊಂದು ಸಾಂಕೇತಿಕ ಪ್ರತಿಭಟನೆ. ಸರ್ಕಾರ ಹಾಗೂ ಜನರನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಈ ಹೋರಾಟ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.

ಇದೇ ವೇಳೆ ಬಿಜೆಪಿ ನಾಯಕರು ಕೆ.ಆರ್.ಎಸ್ ಜಲಾಶಯ ಮುತ್ತಿಗೆ ಹಾಅಕಲು ಮುಂದಾಗಿದ್ದಾರೆ. ಪರಿಸ್ಥಿತಿ ತೀವ್ರಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಲಾಶಯಕ್ಕೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಎಲ್ಲರನ್ನೂ ವಾಹನದಲ್ಲಿ ತುಂಬಿಸಿ ಕರೆದೊಯ್ದಿದ್ದಾರೆ. ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್​.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ ​ಸೇರಿ ಪ್ರಮುಖರು ಭಾಗಿಯಾಗಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular