HomeLatest NewsBREAKING NEWS: ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆ ಕೃಷ್ಣಾನದಿಗೆ ಬಿದ್ದು ನಾಪತ್ತೆ!

BREAKING NEWS: ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆ ಕೃಷ್ಣಾನದಿಗೆ ಬಿದ್ದು ನಾಪತ್ತೆ!

ಬೆಳಗಾವಿ: ಕೃಷ್ಣಾನದಿಯಲ್ಲಿ ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆ ಕಾಲುಜಾರಿ ಬಿದ್ದು ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಇಲ್ಲಿನ ಚಿಕ್ಕೋಡಿ ತಾಲೂಕಿನ ಮಾಂಜರಿಯಲ್ಲಿ ಈ ಘಟನೆ ನಡೆದಿದೆ. ಸಂಗೀತಾ (40) ನೀರಿನಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದಾರೆ. ತುಂಬಿ ಹರಿಯುತ್ತಿದ್ದ ಕೃಷ್ಣಾ ನದಿಗೆ ಬಾಗಿನ ಅರ್ಪಿಸಲೆಂದು ಹೋಗಿದ್ದ ವೇಳೆ ಈ ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ್, ಉಪತಹಶೀಲ್ದಾರ್, ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದಾರೆ. ನದಿಯಲ್ಲಿ ನಾಪತ್ತೆಯಾಗಿರುವ ಮಹಿಳೆಗಾಗಿ ಶೋಧಕಾರ್ಯ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular