HomeKarnatakaBIG NEWS: ಕೃಷ್ಣಾನದಿ ಸೇತುವೆಯಿಂದ ಕೆಳಗೆ ಬಿದ್ದ ಕಾರು: ಮೂವರು ದುರ್ಮರಣ

BIG NEWS: ಕೃಷ್ಣಾನದಿ ಸೇತುವೆಯಿಂದ ಕೆಳಗೆ ಬಿದ್ದ ಕಾರು: ಮೂವರು ದುರ್ಮರಣ

ಚಲಿಸುತ್ತಿದ್ದ ಕಾರು ಕೃಷ್ಣಾನದಿ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ-ಕೊಲ್ಲಾಪುರ ಹೆದ್ದಾರಿಯಲ್ಲಿ ನಡೆದಿದೆ

ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಸಾದ್ ಬಾಲಚಂದ್ರ ಖೇಡೇಕರ್ (35), ಪತ್ನಿ ಪ್ರೇರಣಾ ಹಾಗೂ ವೈಷ್ಣವಿ ಸಂತೋಷ್ ನಾರ್ವೇಕರ್ ಮೃತರು. 7 ವರ್ಷದ ಬಾಲಕ ಸಮರ್ಜಿತ್ ಖೇಡೇಕರ್, ವರದ ಸಂತೋಷ್ ನಾರ್ವೇಕರ್ (19) ಸಾಕ್ಷಿ ನಾರ್ವೇಕರ್ (42) ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಜೈಸಿಂಗಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular