HomeKarnatakaಯಡಿಯೂರಪ್ಪ ಕುಟುಂಬದ ವಿರುದ್ಧ ಈಶ್ವರಪ್ಪ ವಾಗ್ದಾಳಿ: ಬಿಜೆಪಿ ಸೇರ್ಪಡೆ ಬಗ್ಗೆ ಮುಖ್ಯ ಮಾಹಿತಿ

ಯಡಿಯೂರಪ್ಪ ಕುಟುಂಬದ ವಿರುದ್ಧ ಈಶ್ವರಪ್ಪ ವಾಗ್ದಾಳಿ: ಬಿಜೆಪಿ ಸೇರ್ಪಡೆ ಬಗ್ಗೆ ಮುಖ್ಯ ಮಾಹಿತಿ

ವಿಜಯಪುರ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಯಡಿಯೂರಪ್ಪ ಕೇಂದ್ರ ಚುನಾವಣಾ ಸಮಿತಿ ಸದಸ್ಯರು. ಅವರ ಪುತ್ರ ಬಿ.ವೈ. ರಾಘವೇಂದ್ರ ಸಂಸದರಾಗಿದ್ದಾರೆ. ಮತ್ತೊಬ್ಬ ಮಗ ಬಿ.ವೈ. ವಿಜಯೇಂದ್ರ ಶಾಸಕರಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ. ಮೋದಿ ಕುಟುಂಬ ಮುಕ್ತ ರಾಜಕಾರಣ ಮಾಡುತ್ತೇನೆ ಎನ್ನುತ್ತಾರೆ. ಹಾಗಾದರೆ ರಾಜ್ಯ ಬಿಜೆಪಿ ಕೇಂದ್ರದ ಹಿಡಿತದಲ್ಲಿ ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಇಂತಹ ವಿಷಯ ಚರ್ಚೆ ಮಾಡಿದ ಬಳಿಕ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿದ್ದಾರೆ. ಬಿಜೆಪಿ ಮರು ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಿಜೆಪಿಯಲ್ಲಿರುವ ಕೆಲವು ಗೊಂದಲಗಳು ಬಗೆಹರಿಯಬೇಕು. ರಾಜ್ಯ ಬಿಜೆಪಿ ಸ್ವಲ್ಪ ಶುದ್ಧೀಕರಣ ಆಗಬೇಕು. ಈ ಕಾರಣದಿಂದ ನಾನು ಎಂಪಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೆ. ಆದರೆ, ಸುಮ್ಮನೆ ಬಿಜೆಪಿಗೆ ಹೋಗುವುದಿಲ್ಲ. ಏನಾಗಬೇಕು ಎಂಬುದನ್ನು ಕುಳಿತು ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular