HomeKarnatakaಹೇಳಿಕೆಗೆ ಅಪಾರ್ಥ ಕಲ್ಪಿಸಬಾರದು: ಈಶ್ವರಪ್ಪ ಬೆನ್ನಿಗೆ ನಿಂತ ಯಡಿಯೂರಪ್ಪ

ಹೇಳಿಕೆಗೆ ಅಪಾರ್ಥ ಕಲ್ಪಿಸಬಾರದು: ಈಶ್ವರಪ್ಪ ಬೆನ್ನಿಗೆ ನಿಂತ ಯಡಿಯೂರಪ್ಪ

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿಕೆಗೆ ಅಪಾರ್ಥ ಕಲ್ಲಿಸುವ ಕೆಲಸ ಆಗಬಾರದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಹೇಳಿದ ಮಾತನ್ನು ಅಪಾರ್ಥ ಕಲ್ಪಿಸುವ ರೀತಿ ಕಾಂಗ್ರೆಸ್​ನವರು ಮಾತನಾಡುತ್ತಿದ್ದಾರೆ. ಈಶ್ವರಪ್ಪ ರಾಷ್ಟ್ರದ್ರೋಹಿ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ‌ ಕೊಲ್ಲಿ ಎಂದಿದ್ದಾರೆ. ಆದರೆ ಅವರ ಹೇಳಿಕೆ ಬಗ್ಗೆ ಟೀಕೆ, ಟಿಪ್ಪಣಿ, ಅಪಾರ್ಥ ಕಲ್ಪಿಸುವ ಕೆಲಸವಾಗುತ್ತಿದೆ ಎಂದು ಹೇಳಿದ್ದಾರೆ.

ಈಶ್ವರಪ್ಪನವರ ವಿರುದ್ದ ಎಫ್ಐಆರ್ ಹಾಕಿದ್ರೆ ಏನು ತೊಂದರೆ ಇಲ್ಲ, ಅದನ್ನು ನಾವು ಎದುರಿಸುತ್ತೇವೆ ಎಂದು ಹೇಳಿದ ಯಡಿಯೂರಪ್ಪ, ದೆಹಲಿಯಲ್ಲಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಖಂಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಏನು ಬೇಕಾದರೂ ಹೇಳಿಕೆ ಕೊಡುತ್ತಾರೆ. ನಾನು ಹೇಳಿದ್ದೆ ಸರಿ ಅಂತಾ ಸಾಬೀತು‌ ಮಾಡುವ ಪ್ರಯತ್ನ ಮಾಡುತ್ತಾರೆ. ಸಿದ್ದರಾಮಯ್ಯ ಶಾಸಕರನ್ನು ದೆಹಲಿಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುವ ಮೂಲಕ ರಾಜಕೀಯ ದೊಂಬರಾಟ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular