HomeKarnatakaಈಶ್ವರಪ್ಪ ಸವಕಲು ನಾಣ್ಯ, ಹಾಗಾಗಿ ಟಿಕೆಟ್ ಕೊಡಲಿಲ್ಲ: ಸಿಎಂ ಸಿದ್ಧರಾಮಯ್ಯ

ಈಶ್ವರಪ್ಪ ಸವಕಲು ನಾಣ್ಯ, ಹಾಗಾಗಿ ಟಿಕೆಟ್ ಕೊಡಲಿಲ್ಲ: ಸಿಎಂ ಸಿದ್ಧರಾಮಯ್ಯ

ಮೈಸೂರು: ಈಶ್ವರಪ್ಪ ಸವಕಲು ನಾಣ್ಯ. ಹಾಗಾಗಿ ಅವರಿಗೆ ಬಿಜೆಪಿಯವರು ಟಿಕೆಟ್ ಕೊಡಲಿಲ್ಲ. ಈಶ್ವರಪ್ಪ ಮಾತಿಗೆ ಬೆಲೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಿಎಂ, ಕಾಂತರಾಜು ವರದಿಗೆ ಕೆ.ಎಸ್. ಈಶ್ವರಪ್ಪ ವಿರೋಧ ವ್ಯಕ್ತಪಡಿಸುತ್ತಿರುವ ಕುರಿತಾಗಿ ಪ್ರತಿಕ್ರಿಯೆ ನೀಡಿ ಈಶ್ವರಪ್ಪ ಸವಕಲು ನಾಣ್ಯ. ಹಾಗಾಗಿ ಅವರಿಗೆ ಬಿಜೆಪಿ ಟಿಕೆಟ್ ಕೊಡಲಿಲ್ಲ. ಈಶ್ವರಪ್ಪ ಮಾತುಗಳಿಗೆ ಬೆಲೆ ಇಲ್ಲ. ಕಾಂತರಾಜು ವರದಿ ಮಂಡಿಸುವಂತೆ ಸದನದಲ್ಲಿ ನನ್ನೊಂದಿಗೆ ಈಶ್ವರಪ್ಪ ಅವರು ಒತ್ತಾಯ ಮಾಡಿದ್ದಾರಲ್ಲ, ಈಗ ಅದನ್ನು ಸುಟ್ಟು ಹಾಕುತ್ತೇವೆ ಎಂದರೆ ಏನರ್ಥ ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂತರಾಜು ಆಯೋಗದ ಜಾತಿ ಗಣತಿ ವರದಿ ಇನ್ನೂ ನನ್ನ ಕೈ ಸೇರಿಲ್ಲ. ಹೀಗಿರುವಾಗ, ನಾನೇಕೆ ವಿರೋಧ ಮಾಡಲಿ? ವರದಿಯಲ್ಲಿ ಏನೆಂಬುದೇ ಎಂದು ಗೊತ್ತಿಲ್ಲ. ವರದಿ ಸಲ್ಲಿಕೆಯಾದ ನಂತರ ನೋಡೋಣ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular