HomeKarnatakaBIG NEWS: ಪುತ್ರನಿಗೆ ಕೈತಪ್ಪಿದ ಹಾವೇರಿ ಬಿಜೆಪಿ ಟಿಕೆಟ್: ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಸ್ಪರ್ಧೆ ಸಾಧ್ಯತೆ:...

BIG NEWS: ಪುತ್ರನಿಗೆ ಕೈತಪ್ಪಿದ ಹಾವೇರಿ ಬಿಜೆಪಿ ಟಿಕೆಟ್: ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಸ್ಪರ್ಧೆ ಸಾಧ್ಯತೆ: ಕುತೂಹಲ ಮೂಡಿಸಿದ ನಡೆ

ಶಿವಮೊಗ್ಗ: ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.

ಪುತ್ರ ಕೆ.ಇ. ಕಾಂತೇಶ್ ಅವರಿಗೆ ಹಾವೇರಿ ಟಿಕೆಟ್ ಕೈ ತಪ್ಪಿದ್ದಕ್ಕೆ ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಮಾರ್ಚ್ 15 ರಂದು ಈಶ್ವರಪ್ಪ ಬೆಂಬಲಿಗರ ಸಭೆ ಕರೆದಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಕಾಂತೇಶ್ ಅವರಿಗೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಈಶ್ವರಪ್ಪ ಅವರಿಗೆ ನಿರಾಸೆಯಾಗಿದೆ. ಕಾಂತೇಶ್ ಅವರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಅಭಿಮಾನಿಗಳು ಕರೆ ಮಾಡಿ ಬಂಡಾಯ ಸ್ಪರ್ಧೆಗೆ ಒತ್ತಡ ಹೇರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಿಪ್ರಾಯ ಸಂಗ್ರಹಿಸಲು ಈಶ್ವರಪ್ಪ ಮಾರ್ಚ್ 15 ರಂದು ಶುಕ್ರವಾರ ಶಿವಮೊಗ್ಗದಲ್ಲಿ ಬೆಂಬಲಿಗರ ಸಭೆ ಕರೆದಿದ್ದಾರೆ. ಬೆಂಬಲಿಗರು ಹಾವೇರಿ ಇಲ್ಲವೇ ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಬೇಕೆಂದು ತೀವ್ರ ಒತ್ತಡ ಹೇರುತ್ತಿರುವ ಹಿನ್ನಲೆಯಲ್ಲಿ ಈಶ್ವರಪ್ಪ ನಡೆ ಭಾರಿ ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular