HomeKarnatakaಕಾಂತೇಶ್ ತಡೆಯಾಜ್ಞೆ ತಂದ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯೆ

ಕಾಂತೇಶ್ ತಡೆಯಾಜ್ಞೆ ತಂದ ಬಗ್ಗೆ ಈಶ್ವರಪ್ಪ ಪ್ರತಿಕ್ರಿಯೆ

ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರ ಪುತ್ರ ಕೆ.ಈ. ಕಾಂತೇಶ್ ಅವರಿಗೂ ಅಶ್ಲೀಲ ವಿಡಿಯೋ ಭೀತಿ ಎದುರಾಗಿದ್ದು, ಮಾಧ್ಯಮಗಳಿಗೆ ನಿರ್ಬಂಧ ಕೋರಿ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ.

ಬೈಂದೂರಿನಲ್ಲಿ ಪ್ರಚಾರ ಕೈಗೊಂಡಿದ್ದ ಕೆ.ಎಸ್. ಈಶ್ವರಪ್ಪ ಸುದ್ದಿಗಾರರೊಂದಿಗೆ ತಡೆಯಾಜ್ಞೆ ಬಗ್ಗೆ ಮಾತನಾಡಿ, ನಮ್ಮನ್ನು ಹೇಗಾದರೂ ಮಾಡಿ ಕಣದಿಂದ ಹಿಂದೆ ಸರಿಸಬೇಕೆಂಬ ಪ್ರಯತ್ನ ನಡೆಯುತ್ತಿದೆ. ನಮಗೆ ಅಪಮಾನ ಮಾಡಬೇಕೆಂದು ಕುತಂತ್ರ ನಡೆಸಲಾಗುತ್ತಿದ್ದು, ಇಂತಹ ಕುತಂತ್ರ ರಾಜಕಾರಣಕ್ಕೆ ನಾವು ಹೇಗೆ ಉತ್ತರ ಕೊಡಬೇಕು? ಹಾಗಾಗಿ ತಡೆಯಾಜ್ಞೆ ತಂದಿದ್ದೇವೆ. ಅದರ ಹೊರತೂ ಬೇರೇನೂ ಇಲ್ಲ ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಗ್ಗೆ ಮಾತನಾಡಿದ ಈಶ್ವರಪ್ಪ, ಆ ದರಿದ್ರ ವಿಷಯದ ಬಗ್ಗೆ ನಾವ್ಯಾಕೆ ಮಾತನಾಡೋಣ. ಮಾತನಾಡಿದರೆ ಬಾಯಲ್ಲಿ ಹುಳ ಬೀಳುತ್ತದೆ. ದೇಶಾದ್ಯಂತ ಜನ ಛೀ, ಥೂ ಎನ್ನುತ್ತಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular