HomeKarnatakaಬಿಜೆಪಿ ಘಟಾನುಘಟಿಗಳಿಗೆ ಶಾಕಿಂಗ್ ನ್ಯೂಸ್: ಅಶೋಕ್, ಕಾರಜೋಳ, ಕಾಗೇರಿ, ಶೆಟ್ಟರ್ ಸೇರಿ 35 ಮಂದಿಗೆ ಟಿಕೆಟ್...

ಬಿಜೆಪಿ ಘಟಾನುಘಟಿಗಳಿಗೆ ಶಾಕಿಂಗ್ ನ್ಯೂಸ್: ಅಶೋಕ್, ಕಾರಜೋಳ, ಕಾಗೇರಿ, ಶೆಟ್ಟರ್ ಸೇರಿ 35 ಮಂದಿಗೆ ಟಿಕೆಟ್ ಇಲ್ಲ

ಶಿವಮೊಗ್ಗ: ಈ ಬಾರಿ ಸಚಿವರು ಸೇರಿದಂತೆ 35 ಶಾಸಕರನ್ನು ಕೈ ಬಿಡುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಚಿವರಾದ ಆರ್. ಅಶೋಕ್, ಗೋವಿಂದ ಕಾರಜೋಳ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕರಿಗೆ ಟಿಕೆಟ್ ನೀಡುತ್ತಿಲ್ಲ. 75 ವರ್ಷದ ಅವಶ್ಯಕತೆ ಇಲ್ಲ. ಇದು ವರಿಷ್ಠರು ಕೈಗೊಂಡ ತೀರ್ಮಾನವಾಗಿದೆ. ಪಕ್ಷದ ಮಾತು ಮೀರಿದರೆ ತಂದೆ ತಾಯಿಗೆ ದ್ರೋಹ ಮಾಡಿದಂತೆ. ಈಗಾಗಲೇ ಗುಜರಾತ್ ಚುನಾವಣೆಯಲ್ಲಿ ಪ್ರಯೋಗ ಮಾಡಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular