ಚುನಾವಣಾ ಪ್ರಚಾರಕ್ಕೆ ಅಡ್ಡಿ, ರಸ್ತೆಯಲ್ಲೇ ಯಡಿಯೂರಪ್ಪ ಕುಟುಂಬದ ವಿರುದ್ಧ ಹರಿಹಾಯ್ದ ಈಶ್ವರಪ್ಪ

ಶಿವಮೊಗ್ಗ: ಅನುಮತಿ ಇದ್ದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಚುನಾವಣಾ ಪ್ರಚಾರಕ್ಕೆ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಘಟನೆ ನಡೆದಿದೆ. ಮೈಲಾರ ಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಚುನಾವಣೆ ಪ್ರಚಾರಕ್ಕೆ ಈಶ್ವರಪ್ಪ ಬೆಂಬಲಿಗರು ಅನುಮತಿ ಪಡೆದುಕೊಂಡಿದ್ದರು.

ಪ್ರಚಾರಕ್ಕಾಗಿ ವೇದಿಕೆ, ಮೈಕ್, ಕುರ್ಚಿಗಳನ್ನು ಆಯೋಜಕರು ಹಾಕಿದ್ದರು. ಅಂತಿಮ ಕ್ಷಣದಲ್ಲಿ ಚುನಾವಣಾ ಅಧಿಕಾರಿಗಳು ಅನುಮತಿ ನಿರಾಕರಿಸಿದ್ದಾರೆ. ಚುನಾವಣಾ ಅಧಿಕಾರಿಯ ವಿರುದ್ಧ ಕೆ.ಎಸ್. ಈಶ್ವರಪ್ಪ ಕೆಂಡಾಮಂಡಲರಾಗಿದ್ದಾರೆ. ರಸ್ತೆ ಬದಿಯಲ್ಲೇ ನಿಂತು ಈಶ್ವರಪ್ಪ ಪ್ರಚಾರ ಭಾಷಣ ಮಾಡಿದ್ದಾರೆ. ಭಾಷಣದ ಉದ್ದಕ್ಕೂ ಯಡಿಯೂರಪ್ಪ ಕುಟುಂಬದ ವಿರುದ್ಧ ಹರಿಹಾಯ್ದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read