ಮಾಡಾಳ್ ಕೈಗೆ ಸಿಲುಕಿ ನಲುಗಿದ್ದ KSDL ಹೊಸ ದಾಖಲೆ ಬರೆದಿದೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪ್ರಶಾಂತ್ ಮಾಡಾಳ್‌ ರಂತಹ ಭ್ರಷ್ಟರ ಕೈಗೆ ಸಿಕ್ಕಿ ನಲುಗಿ ಹೋಗಿದ್ದ ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ ನಮ್ಮ ಸರ್ಕಾರದ ಪ್ರಾಮಾಣಿಕ ಕಾಳಜಿಯಿಂದಾಗಿ ನಲವತ್ತು ವರ್ಷಗಳಲ್ಲೇ ಹೊಸ ದಾಖಲೆ ಬರೆದಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಕಾರ್ಮಿಕರ ಶ್ರಮದಲ್ಲಿ ಸಂಸ್ಥೆ ಬೆಳೆಸಬೇಕಿದ್ದವರು ಕುಟುಂಬದ ಆಸ್ತಿ ಸಂಪಾದನೆಗೆ ಇಳಿದರೆ ಲಾಭದಲ್ಲಿದ್ದ ಸಂಸ್ಥೆ ಹೇಗೆ ಅವಸಾನದತ್ತ ಸರಿಯುತ್ತದೆಂಬುದಕ್ಕೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಎಸ್‌ಡಿಎಲ್ ಸಾಗಿದ ಹಾದಿ ಉದಾಹರಣೆ. ಅದೇ ಕೆಎಸ್‌ಡಿಎಲ್ ಇಂದು ಹೊಸ ರೂಪದೊಂದಿಗೆ ಖಾಸಗಿ ಕಂಪನಿಗಳಿಗೆ ಸೆಡ್ಡು ಹೊಡೆಯುವಷ್ಟು ಬಲಶಾಲಿಯಾಗಿ ನಿಂತಿರುವುದು ನಮ್ಮ ಸರ್ಕಾರದ ಆಡಳಿತ ವೈಖರಿಗೆ ಸಾಕ್ಷಿ ಎಂದು ಹೇಳಿದ್ದಾರೆ.

ಸ್ವತಂತ್ರ ಭಾರತದಲ್ಲಿ ಸರ್ಕಾರಿ ಸಂಸ್ಥೆಗಳನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷ, ಅವುಗಳ ಉಳಿವಿಗಾಗಿ ಹೋರಾಡುತ್ತಿರುವುದು ಕಾಂಗ್ರೆಸ್ ಪಕ್ಷವೇ. ನಾವು ಕಟ್ಟಿದ ಸಂಸ್ಥೆಯನ್ನು ಮಾರಲು ಅಥವಾ ಭ್ರಷ್ಟಾಚಾರದ ಮೂಲಕ ಕುಟುಂಬದ ಆಸ್ತಿಗಳಿಸುವುದೇ ಬಿಜೆಪಿಯವರ ಏಕೈಕ ಉದ್ದೇಶ. ಇದನ್ನು ನಾಡಿನ ಜನತೆ ಅರ್ಥಮಾಡಿಕೊಳ್ಳಬೇಕು ಎಂದು ಸಿಎಂ ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read