HomeKarnatakaKSET ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: 41 ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಪಟ್ಟಿ ಪ್ರಕಟ

KSET ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: 41 ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಪಟ್ಟಿ ಪ್ರಕಟ

ಬೆಂಗಳೂರು: KSET-24 ಸಂಬಂಧಿಸಿದಂತೆ 41 ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಪಟ್ಟಿಯನ್ನು KEA ಪ್ರಕಟಿಸಿದೆ. ಇದಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಡಿ.19ರ ಮಧ್ಯಾಹ್ನ 12.30ರೊಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಲು ಕೋರಲಾಗಿದೆ.

ದಿನಾಂಕ 24.11.2024 ರಂದು ಪ್ರಾಧಿಕಾರದಿಂದ ನಡೆಸಿದ ಕೆಸೆಟ್-2024 ಪರೀಕ್ಷೆಗೆ ಸಂಬಂಧಿಸಿದಂತೆ, ಒಟ್ಟು 41 ವಿಷಯಗಳ ಕೀ ಉತ್ತರಗಳನ್ನು ಪ್ರಕಟಿಸಿ ದಿನಾಂಕ 29.11.2024 ರವರೆಗೆ ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.

ಪ್ರಕಟಿತ ಕೀ ಉತ್ತರಗಳಿಗೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಶಿಫಾರಸ್ಸಿನಂತೆ ಅಂತಿಮ ಕೀ ಉತ್ತರಗಳನ್ನು ದಿನಾಂಕ 13.12.2024 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಂತಿಮ ಕೀ ಉತ್ತರಗಳನ್ವಯ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಸದರಿ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್ ಮೂಲಕ ದಿನಾಂಕ: 19.12.2024 ಮಧ್ಯಾಹ್ನ 12.30 ರೊಳಗೆ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಪೂರಕ ದಾಖಲೆಗಳಿಲ್ಲದೆ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೂರವಾಣಿ: 080-23 564 583

ಸಹಾಯವಾಣಿ: 080-23 460 460.

ಇ-ಮೇಲ್: [email protected]

ವೆಬ್‌ಸೈಟ್: http://kea.kar.nic.in

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular