KSFC ಯಲ್ಲಿ ಸಾಲ ಪಡೆದು ಸುಸ್ತಿದಾರರಾಗಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಸಾಲ ಪಡೆದು ಸುಸ್ತಿದಾರರಾದವರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ‘ಒನ್ ಟೈಮ್ ಸೆಟಲ್ಮೆಂಟ್’ ಯೋಜನೆಯನ್ನು ಮತ್ತೆ ಜಾರಿಗೊಳಿಸಲು ತೀರ್ಮಾನಿಸಲಾಗಿದೆ.

ಶುಕ್ರವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ 345 ಕೋಟಿ ರೂಪಾಯಿ ಸಾಲ ಸುಸ್ತಿಯಾಗಿದ್ದು, ಹೀಗಾಗಿ 2003 ರಿಂದ ಈವರೆಗಿನ ಸಾಲಗಳಿಗೆ ಅನ್ವಯವಾಗುವಂತೆ ‘ಒನ್ ಟೈಮ್ ಸೆಟಲ್ಮೆಂಟ್’ ಅವಕಾಶ ಕಲ್ಪಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read