ಶಿವಮೊಗ್ಗ, ವಿಜಯಪುರ ವಿಮಾನ ನಿಲ್ದಾಣದಲ್ಲಿ ವಿವಿಧ ಹುದ್ದೆಗೆ ನೇಮಕಾತಿ

ಶಿವಮೊಗ್ಗ ಮತ್ತು ವಿಜಯಪುರ ವಿಮಾನ ನಿಲ್ದಾಣಕ್ಕೆ ತಾಂತ್ರಿಕ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ಪ್ರಕಟಣೆ ನೀಡಿದೆ.

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮವು ಶಿವಮೊಗ್ಗ ಮತ್ತು ವಿಜಯಪುರ ವಿಮಾನ ನಿಲ್ದಾಣಗಳ ಕಾರ್ಯಾಚರಣೆ ನಡೆಸುತ್ತಿದೆ. ಕಂಪನಿಯು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ತಾಂತ್ರಿಕ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಿದೆ.

ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ದೇಶಕರು ಒಂದು ಹುದ್ದೆ, ವಿಜಯಪುರ ವಿಮಾನ ನಿಲ್ದಾಣದ ಸಿವಿಲ್ ಹೆಡ್ ಒಂದು ಹುದ್ದೆ, ವಿಜಯಪುರ ವಿಮಾನ ನಿಲ್ದಾಣದ ಏರ್ಪೋರ್ಟ್ ಫೈರ್ ಫೈಟಿಂಗ್ ಹೆಡ್ ಒಂದು ಹುದ್ದೆಗೆ ನೇಮಕಾತಿ ನಡೆಯಲಿದೆ.

ಆಸಕ್ತ ಅಭ್ಯರ್ಥಿಗಳು ಮೂಲ ಪತ್ರಗಳ ಜೊತೆಗೆ ಅಂಕಪಟ್ಟಿ, ಅನುಭವ ವಿವರ ಒಳಗೊಂಡ ಅರ್ಜಿಯೊಂದಿಗೆ ಕೆ.ಎಸ್.ಐ.ಐ.ಡಿ.ಸಿ. ಬೆಂಗಳೂರು ಇಲ್ಲಿಗೆ ಡಿಸೆಂಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ನೇರ ಸಂದರ್ಶನಕ್ಕೆ ಹಾಜರಾಗುವುದು. ಸ್ಪಷ್ಟನೆಗಳಿಗಾಗಿ ಮೊಬೈಲ್ ಸಂಖ್ಯೆ 98458 33566 ಸಂಪರ್ಕಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read