HomeKarnatakaಪರೀಕ್ಷಾ ಅಕ್ರಮ: KSOU ವಿರುದ್ಧ ತೀವ್ರಗೊಂಡ ಪ್ರತಿಭಟನೆ: ಎಬಿವಿಪಿಯಿಂದ ಕಚೇರಿಗೆ ಮುತ್ತಿಗೆ ಯತ್ನ

ಪರೀಕ್ಷಾ ಅಕ್ರಮ: KSOU ವಿರುದ್ಧ ತೀವ್ರಗೊಂಡ ಪ್ರತಿಭಟನೆ: ಎಬಿವಿಪಿಯಿಂದ ಕಚೇರಿಗೆ ಮುತ್ತಿಗೆ ಯತ್ನ

ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕಚೇರಿಯಲ್ಲಿ ಪದವಿ, ಸ್ನಾತಕೋತ್ತರ ಪರೀಕ್ಷೆಯಲ್ಲಿ ಹಣ ಪಡೆದು ಮಾಸ್ ಕಾಪಿಗೆ ಅವಕಾಶ ನೀಡಿದ್ದ ಪ್ರಕರಣ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.

ಶಿವಮೊಗ್ಗ ನಗರದ ಕೆಎಸ್‌ಓಯು ಪ್ರಾದೇಶಿಕ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಪರೀಕ್ಷಾ ಅಕ್ರಮದ ವಿರುದ್ಧ ಎಬಿವಿಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಲ್ಕೋಳ ಸರ್ಕಲ್ ಸಮೀಪವಿರುವ ಕೆ.ಎಸ್.ಒಯು ಪ್ರಾದೇಶಿಕ ಕಚೇರಿ ಎದುರು ಎಬಿವಿಪಿ ಪ್ರತಿಭಟನೆ ನಡೆಸುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಾಗೂ ಪರೀಕ್ಷಾ ಅಕ್ರಮ ತಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಎಬಿವಿಪಿ ಕಾರ್ಯಕರ್ತರು, ಕೆ.ಎಸ್.ಓ.ಯು ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಡೆದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಕೆ.ಪಿ.ಎಸ್.ಸಿ ಬಳಿಕ ಇದೀಗ ಕೆ.ಎಸ್.ಒ.ಯು ಸರದಿ: ಪದವಿ, ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಮೂಹಿಕ ನಕಲು ಮಾಡಲು ಅವಕಾಶ: ಪರೀಕ್ಷೆ ಬಳಿಕ ಹಣ ವಸೂಲಿ

ಶಿವಮೊಗ್ಗ: ಕೆ.ಪಿ.ಎಸ್‌.ಸಿ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷಾ ಅಕ್ರಮ ತನಿಖೆ ಹಂತದಲ್ಲಿರುವಾಗಲೇ ಮತ್ತೊಂದು ಪರೀಕ್ಷಾ ಅಕ್ರಮ ಬೆಳಕಿಗೆ ಬಾಂದಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕಚೇರಿಯಲ್ಲಿ ಪರೀಕ್ಷೆಯಲ್ಲಿ ಮಾಸ್ ಕಾಪಿಗೆ ಅವಕಾಶ ನೀಡಲಾಗಿದೆ.

ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್ ಸಮೀಪವಿರುವ ಕೆ.ಎಸ್‌.ಓ.ಯು ಪ್ರಾದೇಶಿಕ ಕಚೇರಿಯ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಕರ್ನಾಟಕ ರಾಜ್ಯ ಮುಕ್ತ ವಿವಿಯ ಪರೀಕ್ಷೆಗಳು ನಡೆಯುತ್ತಿದೆ. ಈ ವೇಳೆ ಸಾಮೂಹಿಕ ನಕಲು ಮಾಡಲು ಅವಕಾಶ ನೀಡಲಾಗಿದೆ. ಅಕ್ಟೋಬರ್ 7ರಿಂದ ಆರಂಭವಾಗಿರುವ ಮುಕ್ತ ವಿವಿಯ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳು ನವೆಂಬರ್ 20ರವರೆಗೆ ನಡೆಯಲಿವೆ.

ಹಣ ಕೊಟ್ಟರೇ ಮೊಬೈಲ್, ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.ಕೆ.ಎಸ್‌.ಓ.ಯು ಶಿವಮೊಗ್ಗ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ನೇತೃತ್ವದಲ್ಲಿ ಹಣ ಪಡೆದು ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಸಾಮೂಹಿಕ ನಕಲು ಮಾಡಿಸುತ್ತಿರುವುದು ಬೆಳಕಿಗೆ ಬಂದಿದೆ.

ಹಣ ಕೊಟ್ಟು ಪರೀಕ್ಷೆಯನ್ನು ಹೇಗೆ ಬೇಕಾದರೂ ಬರೆಯಬಹುದು, ಹಣ ಕೊಟ್ಟವರಿಗೆ ಪುಸ್ತಕ ಮತ್ತು ಮೊಬೈಲ್ ಇಟ್ಟುಕೊಂಡೇ ಪರೀಕ್ಷೆ ಬರೆಯಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಹಣ ನೀಡಿದವರಿಗೆ ಎರಡನೇ ಫ್ಲೋರ್‌ನಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಹಣ ನೀಡದವರಿಗೆ ಮೊದಲ ಫ್ಲೋರ್‌ನಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತಿದೆ.

ವಿದ್ಯಾರ್ಥಿಗಳು ಪುಸ್ತಕ ಹಾಗೂ ಮೊಬೈಲ್ ನೋಡಿ ಪರೀಕ್ಷೆ ಬರೆಯುತ್ತಿರುವ ಸಾಮೂಹಿಕ ನಕಲು ಮಾಡುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ಸಿಬ್ಬಂದಿಯನ್ನು ಮುಂದೆ ಬಿಟ್ಟು ಹಣ ಸಂಗ್ರಹಿಸಿ, ಮುಕ್ತವಾಗಿ ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ.

ಪರೀಕ್ಷೆ ಆರಂಭವಾದ ಅರ್ಧ ಗಂಟೆ ಬಳಿಕ ವಿದ್ಯಾರ್ಥಿಗಳ ಲೆಕ್ಕ ಮಾಡಲು ಪ್ರಾದೇಶಿಕ ನಿರ್ದೇಶಕ ಸ್ವಾಮಿ ಅವರು ಬರುತ್ತಿದ್ದರು. ಅದೇ ಸಮಯದಲ್ಲಿ ಪರೀಕ್ಷಾ ಕೇಂದ್ರದ ಪ್ರತ್ಯೇಕ ಕೊಠಡಿಯಲ್ಲಿ ಖುದ್ದಾಗಿ ನಿಂತು ಅವರು ಸಾಮೂಹಿಕ ನಕಲು ಮಾಡಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬಳಿಕ ಎಸ್ ಡಿಸಿಗಳಾದ ವಿನಯಾ ಕೆ.ಜೆ., ನಿಂಗಾ ನಾಯ್ಕ್, ಅಟೆಂಡರ್ ಯೋಗೇಶ್ ಗೌಡ ಹಾಗೂ ಡಾಟಾ ಎಂಟ್ರಿ ಆಪರೇಟರ್ ಹರೀಶ್ ಅವರನ್ನು ಮುಂದೆ ಬಿಟ್ಟು ಹಣ ವಸೂಲಿ ಮಾಡಿಸಲಾಗುತ್ತದೆ.

ಒಂದು ವಿಷಯಕ್ಕೆ ಒಂದು ಸಾವಿರ ರೂ.ನಂತೆ ಓರ್ವ ವಿದ್ಯಾರ್ಥಿಯಿಂದ ಹಣ ವಸೂಲಿ ಮಾಡುತ್ತಿರುವ ಆರೋಪವಿದ್ದು, ಪ್ರತಿನಿತ್ಯ 70 ರಿಂದ 100 ವಿದ್ಯಾರ್ಥಿಗಳ ಬಳಿ ಪರೀಕ್ಷೆ ಮುಗಿದ ಬಳಿಕ ಹಣ ವಸೂಲಿ ಮಾಡಲಾಗುತ್ತಿದೆ. ಪರೀಕ್ಷೆ ಬರೆದ ನಂತರ ಅಲ್ಲೇ ವಿದ್ಯಾರ್ಥಿಗಳಿಂದ ಫೋನ್ ಪೇ ಅಥವಾ ಗೂಗಲ್ ಪೇ ಮಾಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular