HomeKarnatakaBIG NEWS: ಪ್ರಶ್ನೆ ಪತ್ರಿಕೆ ಮಾರಾಟ ಕೇಸ್: ಮರು ಪರೀಕ್ಷೆಗೆ ನಿರ್ಧರಿಸಿದ KSOU

BIG NEWS: ಪ್ರಶ್ನೆ ಪತ್ರಿಕೆ ಮಾರಾಟ ಕೇಸ್: ಮರು ಪರೀಕ್ಷೆಗೆ ನಿರ್ಧರಿಸಿದ KSOU

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಶ್ನೆ ಪತ್ರಿಕೆ ಮಾರಾಟ ಹಾಗೂ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಬೆಳವಣಿಗೆ ಬೆನ್ನಲ್ಲೇ ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯ ಮರು ಪರೀಕ್ಷೆಗೆ ನಿರ್ಧರಿಸಿದೆ. ಪರೀಕ್ಷೆಗೆ ಒಂದು ದಿನ ಮೊದಲು ಬಿ.ಕಾಂ ಪ್ರಶ್ನೆ ಪತ್ರಿಕೆ ಮಾರಾಟವಾಗಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೋರ್ವ ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ನವೀನ್ ಹಾಗೂ ಮುರಳೀಧರ್ ಬಂಧಿತ ಆರೋಪಿಗಳು. ಬಿ.ಕಾಂ ಕಂಪ್ಯೂಟರ್ ಇನ್ ಬಿಸಿನೆಸ್ ವಿಷಯದ ಪ್ರಶ್ನೆ ಪತ್ರಿಕೆ ಮಾರಾಟವಾಗಿತ್ತು. ಈ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಕೆಎಸ್ಒಯು ನಿರ್ಧರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular