HomeKarnatakaKSOU ಮತ್ತೊಂದು ಅವಾಂತರ; ಪರೀಕ್ಷೆಗೆ ಒಂದು ದಿನ ಮೊದಲು ಪ್ರಶ್ನೆ ಪತ್ರಿಕೆ ಲೀಕ್

KSOU ಮತ್ತೊಂದು ಅವಾಂತರ; ಪರೀಕ್ಷೆಗೆ ಒಂದು ದಿನ ಮೊದಲು ಪ್ರಶ್ನೆ ಪತ್ರಿಕೆ ಲೀಕ್

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ(KSOU)ದ ಮತ್ತೊಂದು ಅವಾಂತರ ಬಯಲಾಗಿದೆ. ಪರೀಕ್ಷೆಗೆ ಒಂದು ದಿನ ಮೊದಲು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.

ಕಂಪ್ಯೂಟರ್ ಇನ್ ಬಿಸಿನೆಸ್ ವಿಷಯದ ಪ್ರಶ್ನೆ ಪತ್ರಿಕೆ ವಾಟ್ಸಾಪ್ ಗಳಲ್ಲಿ ಹರಿದಾಡುತ್ತಿದೆ. ಕೆ.ಎಸ್.ಒ.ಯು ಮಂಗಳೂರು ಕೇಂದ್ರದ ಸಿಬ್ಬಂದಿ ಪ್ರಶ್ನೆ ಪತ್ರಿಕೆ ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಥಿಯೋರ್ವ ಪರಿಶೀಲನೆ ಮಾಡಲು ಹಣ ನೀಡಿ ಪ್ರಶ್ನೆ ಪತ್ರಿಕೆ ತೆಗೆದುಕೊಂಡಿದ್ದು, ನಂತರ ಪರೀಕ್ಷೆಗೆ ನೀಡಿದ ಪ್ರಶ್ನೆ ಪತ್ರಿಕೆ ಹಾಗೂ ಸಿಬ್ಬಂದಿ ಮಾರಾಟ ಮಾಡಿದ ಪ್ರಶ್ನೆ ಪತ್ರಿಕೆ ಎರಡೂ ಒಂದೇ ಆಗಿದೆ. ಕಂಪ್ಯೂಟರ್ ಇನ್ ಬಿಸಿನೆಸ್ ವಿಷಯದ ಪ್ರಶ್ನೆ ಪತ್ರಿಕೆಯನ್ನು 2000 ರೂಪಾಯಿಗೆ ಮಾರಾಟವಾಗಿದ್ದು, ಈ ಬಗ್ಗೆ ಚಂದು ಹೆಚ್.ಎಸ್.ಎಂಬ ವಿದ್ಯಾರ್ಥಿ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ನಡೆಸಿದ್ದಾರೆ.

ಆದರೆ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಈವರೆಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

For Latest News Updates, Join Our Whatsapp Community🚩
RELATED ARTICLES

Most Popular