HomeKarnatakaKSRP ಪೊಲೀಸ್ ನೇಮಕಾತಿ ಲಿಖಿತ ಪರೀಕ್ಷೆ ಫಲಿತಾಂಶ ಪ್ರಕಟ

KSRP ಪೊಲೀಸ್ ನೇಮಕಾತಿ ಲಿಖಿತ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: KSRP ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಶುಕ್ರವಾರ ಪ್ರಕಟಿಸಿದೆ.

ಆಕ್ಷೇಪಣೆಗಳು ಇದಲ್ಲಿ ಸೆ.27ರೊಳಗೆ ನಿಗದಿತ ಲಿಂಕ್‌ ಮೂಲಕ ಸಲ್ಲಿಸಬಹುದು.

ದಾಖಲೆ ಅವಧಿ ಅಂದರೆ ಪರೀಕ್ಷೆ ನಡೆದು ಐದು ದಿನಗಳಲ್ಲಿಯೇ ಫಲಿತಾಂಶ ಪ್ರಕಟಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ OMR ಉತ್ತರ ಪತ್ರಿಕೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಲಾಗಿತ್ತು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

PGCET ಎಂಬಿಎ, ಎಂಸಿಎ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: PGCET-2026: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ.

ಒಟ್ಟು 23,164 ಸೀಟು ಈ ಸುತ್ತಿನಲ್ಲಿ ಹಂಚಿಕೆಯಾಗಿವೆ.

ಎಂಬಿಎ ಕೋರ್ಸ್ ಗೆ 11,462 ಹಾಗೂ ಎಂಸಿಎ ಕೋರ್ಸ್ ಗೆ 8,093 ಮತ್ತು ಎಂ.ಟೆಕ್ ಕೋರ್ಸ್ ಗೆ 3,609 ಸೀಟು ಹಂಚಿಕೆಯಾಗಿವೆ.

ಎಂಸಿಎ ನಲ್ಲಿ 9,574, ಎಂಬಿಎ ನಲ್ಲಿ 2,195 ಹಾಗೂ ಎಂ.ಟೆಕ್ ನಲ್ಲಿ 1,821 ಸೀಟು ಹಂಚಿಕೆಯಾಗದೆ ಉಳಿದಿವೆ.

ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಒಂದೆರಡು ದಿನಗಳಲ್ಲಿ ಪ್ರಕಟಿಸಲಾಗುತ್ತದೆ.

ವಿಕಲಚೇತನರ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಶಿವಮೊಗ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಫಲಾನುಭವಿ ಆಧಾರಿತ ಯೋಜನೆಗಳ ಸೌಲಭ್ಯಕ್ಕಾಗಿ ವಿಕಲಚೇತನರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಡಿ.ಬಿ.ಟಿ (ನೇರ ನಗದು ವರ್ಗಾವಣೆ) ತಂತ್ರಾಂಶದಡಿ ಶಿವಮೊಗ್ಗ ಜಿಲ್ಲೆಯ ವಿಶೇಷ ವಿಕಲಚೇತನ ವ್ಯಕ್ತಿಗಳು ಇಲಾಖೆಯ 14 ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ವಿಕಲಚೇತನ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಸೇವಾಸಿಂಧು/ಸೇವಾ ಒನ್ https://sevaone.karnataka.gov.in;ಪೋರ್ಟಲ್ ಮೂಲಕ ದಿನಾಂಕ 22-09-2026 ರಿಂದ 30-10-2026 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ನಿಗದಿತ ಅಂತಿಮ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳಿಗೆ ಅವಕಾಶವಿರುವುದಿಲ್ಲ. ಆದ್ದರಿಂದ ಶಿವಮೊಗ್ಗ ಜಿಲ್ಲೆಯ ಅರ್ಹ ವಿಕಲಚೇತನರು ಸೌಲಭ್ಯ ಪಡೆಯಲು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular