HomeKarnatakaಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ

ಬೆಂಗಳೂರು: ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲ್ಲಿದ್ದು, ಪರೀಕ್ಷಾ ಕೇಂದ್ರಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಿಎಂಟಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ.

ಈಗಾಗಲೇ ಕೆ.ಎಸ್.ಆರ್.ಟಿ.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಂದ ವಾಸ ಸ್ಥಳಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ವಿದ್ಯಾರ್ಥಿಗಳು ಮನೆಯಿಂದ ಪರೀಕ್ಷಾ ಕೇಂದ್ರದವರೆಗೆ ಹೋಗಿಬರಲು ಬಿಎಂಟಿಸಿ ಸಾಮಾನ್ಯ ಸೇವೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷಾ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳಲ್ಲಿ ಬಸ್ ಕಾರ್ಯಾಚರಣೆ ಇರುತ್ತದೆ. ಹೆಚ್ಚುವರಿ ಬಸ್ ಗಳ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular