ಮಂಡ್ಯ: ಮೂರು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯ ಬಾಚನಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಮಳವಳ್ಳಿ-ಕೊಳ್ಳೆಗಾಲ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಮೊದಲು ಎರಡು ಕೆ.ಎಸ್.ಆರ್.ಟಿ.ಸಿ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿದ್ದವು. ಅಪಘಾತವಾಗಿದ್ದ ಬಸ್ ಗಳಿಗೆ ಮತ್ತೊಂದು ಬಸ್ ಬಂದು ಗುದ್ದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳವಳ್ಳಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.