ಕಾರವಾರ: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನ ಸ್ಟೇರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ಹೊಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂದಗೋಡ ತಾಲೂಕಿನ ಮಳಗಿ ಬಳಿ ನಡೆದಿದೆ.
ಸ್ಟೇರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಚಾಲಕ ಹಾಗೂ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬಸ್ ಶಿರಸಿಯಿಂದ ಹುಬ್ಬಳ್ಳಿಗೆ ತೆರಳುತ್ತಿತ್ತು. ಈ ವೇಳೆ ಈ ಅವಘಡ ಸಂಭವಿಸಿದೆ. ಮುಂದಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
