ಹಾಸನ: ಎರಡು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ನಡೆದಿದೆ.
ಅಪಘಾತದಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಅವರಲ್ಲಿ ಓರ್ವ ಚಾಲಕ ಸೇರಿ 8 ಜನರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ಮಂಗಳೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.