HomeKarnatakaBREAKING NEWS: ಶಾಲಾ ಕಾಂಪೌಂಡ್, ಮನೆಗೆ ಬಸ್ ಡಿಕ್ಕಿ; ಓರ್ವ ಸ್ಥಳದಲ್ಲೇ ದುರ್ಮರಣ

BREAKING NEWS: ಶಾಲಾ ಕಾಂಪೌಂಡ್, ಮನೆಗೆ ಬಸ್ ಡಿಕ್ಕಿ; ಓರ್ವ ಸ್ಥಳದಲ್ಲೇ ದುರ್ಮರಣ

ಹಾಸನ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಕಾಂಪೌಂಡ್ ಹಾಗೂ ಮನೆ ಗೋಡೆಗೆ ಡಿಕ್ಕಿ ಹೊಡೆದಿದ್ದು ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಬಾಗೆ ಗ್ರಾಮದಲ್ಲಿ ನಡೆದಿದೆ.

ಉದಯಪುರ ಗ್ರಾಮದ ಅಮೃತ ರಾಜ್ (34) ಮೃತ ದುರ್ದೈವಿ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಕಾಂಪೌಂಡ್ ಹಾಗೂ ಮನೆಗೆ ಗುದ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಕಲೇಶಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular