HomeKarnatakaBREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ

ಕೋಲಾರ: ರಾಜ್ಯದಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ.

ಅಡ್ಡಗಲ್ ಬಳಿ ವಿದ್ಯಾರ್ಥಿಗೆ ಬಸ್ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ತಮಟಂಪಲ್ಲಿ ಗ್ರಾಮದ ಭಾರ್ಗವ ರೆಡ್ಡಿ (18) ಮೃತ ವಿದ್ಯಾರ್ಥಿ.

ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular