HomeLatest NewsBREAKING: ಕೆ.ಎಸ್.ಆರ್.ಟಿ.ಸಿ ಬಸ್ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

BREAKING: ಕೆ.ಎಸ್.ಆರ್.ಟಿ.ಸಿ ಬಸ್ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಬಳ್ಳಾರಿ: ಕೆ.ಎಸ್.ಆರ್.ಟಿ.ಸಿ ಬಸ್ ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ಈ ದುರಂತ ಸಂಭವಿಸಿದೆ. ಮಂಡ್ಯ ಮೂಲದ ಶ್ವೇತಾ (38), ಕನಕಪುರ ಬಾಲನಾಯಕ (42) ಮೃತ ದುರ್ದೈವಿಗಳು.

ಮಸ್ಕಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ 10 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಿರಗುಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಬಳ್ಳಾರಿ ಎಸ್ ಪಿ ಶೋಭಾ ರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular