HomeKarnatakaBREAKING NEWS: ಕೆ.ಎಸ್.ಆರ್.ಟಿ.ಸಿ ಬಸ್-ಬೈಕ್ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್-ಬೈಕ್ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಕಲಬುರ್ಗಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಲಬುರ್ಗಿ ಜಿಲ್ಲೆಯ ಆಳಂದ ಬಳಿಯ ಮಿನಿ ವಿಧಾನಾಸೌಧ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಿದ್ದಲಿಂಗಯ್ಯ ಹಾಗೂ 8 ವರ್ಷದ ಸಂಕೇತ್ ಮೃತ ದುರ್ದೈವಿಗಳು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular