ಕೋಲಾರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಗೊಲ್ಲಹಳ್ಳಿ ಬಳಿ ನಡೆದಿದೆ.
ಮೃತರನ್ನು ಪೌಲ್ಟಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಗೌಡ (30) ಮತ್ತು ಸಭ್ಯ (29) ಎಂದು ಗುರುತಿಸಲಾಗಿದೆ.
ಬೆಳಗ್ಗೆ ಎಂದಿನಂತೆ ಕೆಲಸಕ್ಕೆಂದು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೇತಮಂಗಲ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.