BIG NEWS: ಬೈಕ್ ಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ಪಲ್ಟಿಯಾಗಿ ಬಿದ್ದ KSRTC ಬಸ್: ಸಬ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ಸಾವು

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ಪಲ್ಟಿಯಾಗಿ ಬಿದ್ದಿದ್ದು, ಅಪಘಾತದಲ್ಲಿ ಸಬ್ ಇನ್ಸ್ ಪೆಕ್ಟರ್ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರ ಪೊಲೀಸ್ ಠಾಣೆ ಬಳಿ ಈ ಅಪಘಾತ ಸಂಭವಿಸಿದೆ. ಬಸ್ ಡಿಕ್ಕಿಯಾದ ಹೊಡೆತಕ್ಕೆ ಬೈಕ್ ನಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ಸಾವನ್ನಪ್ಪಿದ್ದಾರೆ. ನಾಗರಾಜು ಮೃತ ಸಬ್ ಇನ್ಸ್ ಪೆಕ್ಟರ್.

ಅಪಘಾತದಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ರಸ್ತೆ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಬೈಕ್ ಗಳಿಗೆ ಡಿಕ್ಕಿ ಹೊಡೆದಿದೆ. ಕಗ್ಗಲೀಪುರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read