ತುಮಕೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನದುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಬಳಿ ನಡೆದಿದೆ.
ಯೋಗೇಶ್ (23) ಹಾಗೂ ದಯಾನಂದ್ (25) ಮೃತ ದುರ್ದೈವಿವಿಗಳು. ಮೃತರು ಬಿದರಕೆರೆ ಗ್ರಾಮದವರು ಎಂದು ತಿಳಿದುಬಂದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರಿಗೆ ಎದುರಿನಿಂದ ಬಂದ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ನೊಣವಿನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.