HomeKarnatakaBIG NEWS: ಮತ್ತೊಂದು KSRTC ಬಸ್-ಬೈಕ್ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

BIG NEWS: ಮತ್ತೊಂದು KSRTC ಬಸ್-ಬೈಕ್ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನದುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಬಳಿ ನಡೆದಿದೆ.

ಯೋಗೇಶ್ (23) ಹಾಗೂ ದಯಾನಂದ್ (25) ಮೃತ ದುರ್ದೈವಿವಿಗಳು. ಮೃತರು ಬಿದರಕೆರೆ ಗ್ರಾಮದವರು ಎಂದು ತಿಳಿದುಬಂದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರಿಗೆ ಎದುರಿನಿಂದ ಬಂದ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ನೊಣವಿನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular