HomeKarnatakaKSRTC ಬಸ್- ಬೈಕ್ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

KSRTC ಬಸ್- ಬೈಕ್ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ತುಮಕೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದಂಡಿಪುರ ವಿಜಯಾನಂದ ಕ್ರಾಸ್ ಬಳಿ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸಹಳ್ಳಿ ಗ್ರಾಮದ ಮಹೇಂದ್ರ (19) ಮೃತ ದುರ್ದೈವಿ. ಬೈಕ್ ನಲ್ಲಿದ್ದ ಇನ್ನಿಬ್ಬರು ಚರಣ್ ಹಾಗೂ ಅನೀಲ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೋಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular