HomeLatest NewsBIG NEWS: ಕೆ.ಎಸ್.ಆರ್.ಟಿ.ಸಿ ಬಸ್-ಕಾರು ಭೀಕರ ಅಪಘಾತ: ಚಾಲಕ ಸ್ಥಳದಲ್ಲೇ ದುರ್ಮರಣ

BIG NEWS: ಕೆ.ಎಸ್.ಆರ್.ಟಿ.ಸಿ ಬಸ್-ಕಾರು ಭೀಕರ ಅಪಘಾತ: ಚಾಲಕ ಸ್ಥಳದಲ್ಲೇ ದುರ್ಮರಣ

ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡಿವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಮಂಚನಹಳ್ಳಿಯಲ್ಲಿ ನಡೆದಿದೆ.

ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ಚಾಲಕ ಸುನೀಲ್(34) ಸಾವನ್ನಪ್ಪಿದ್ದಾರೆ. ಮೃತ ಸುನೀಲ್ ಮೈಸೂರಿನ ಕನಕದಾಸನಗರ ನಿವಾಸಿ. ರಮೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರು ಮೈಸೂರಿನಿಂದ ಹಾಸನದ ಕಡೆಗೆ ಹೋಗುತ್ತಿತ್ತು. ಚಿಕ್ಕಮಗಲುರಿನಿಂದ ಮೈಸೂರು ಕಡೆಗೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಅಪಘತದಲ್ಲಿ ಬಸ್ ನಲ್ಲಿದ್ದ ಕೆಲ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಕೆ.ಆರ್.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular