HomeKarnatakaBREAKING : ಬೆಂಗಳೂರಲ್ಲಿ ಹೊತ್ತಿ ಉರಿದ 'KSRTC' ಬಸ್ ; 24 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು.!

BREAKING : ಬೆಂಗಳೂರಲ್ಲಿ ಹೊತ್ತಿ ಉರಿದ ‘KSRTC’ ಬಸ್ ; 24 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು.!

ಬೆಂಗಳೂರು : ಬೆಂಗಳೂರಿನ  ರಾಜಾಜಿನಗರದಲ್ಲಿರುವ ಲೂಲು ಮಾಲ್ ಮುಂಭಾಗದಲ್ಲಿ ಗುರುವಾರ ರಾತ್ರಿ ಕೆಎಸ್ಆರ್ಟಿಸಿ ಬಸ್ ಬೆಂಕಿಗೆ ಆಹುತಿಯಾಗಿರುವ ಭೀಕರ ಘಟನೆ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಈ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ತಕ್ಷಣವೇ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದ್ದರಿಂದ ಭಾರಿ ಪ್ರಾಣಾಪಾಯ ತಪ್ಪಿದೆ.

ಬೆಂಗಳೂರಿನ ರಾಜಾಜಿನಗರದ ಲೂಲು ಮಾಲ್ ಮುಂಭಾಗ  ಮುಂಭಾಗ ರಾತ್ರಿ ಸುಮಾರು 10:20 ರ ಸುಮಾರಿಗೆ ಈ ಅವಘಡ ಸಂಭವಿಸಿದೆಈ ಬಸ್ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಬಸ್‌ನಲ್ಲಿ ಸುಮಾರು 24 ಮಂದಿ ಪ್ರಯಾಣಿಕರಿದ್ದರು

ಪ್ರಾಥಮಿಕ ಮಾಹಿತಿಯ ಪ್ರಕಾರ, ಡೀಸೆಲ್ ಸೋರಿಕೆ (Diesel Leakage) ಅಥವಾ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೃಷ್ಟವಶಾತ್ ಪಾರು: ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ತಕ್ಷಣ ಬಸ್ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಇದರಿಂದಾಗಿ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ

ಸ್ಥಳೀಯರ ನೆರವು: ಬೆಂಕಿ ಹೊತ್ತಿಕೊಂಡ ತಕ್ಷಣ ಸ್ಥಳೀಯರು ಮತ್ತು ಸಾರ್ವಜನಿಕರು ಪ್ರಯಾಣಿಕರನ್ನು ರಕ್ಷಿಸಲು ಸಹಾಯ ಮಾಡಿದರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು

ಬಸ್ ಸಂಪೂರ್ಣ ಭಸ್ಮ: ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವಷ್ಟರಲ್ಲಿ ಬಸ್‌ನ ಸೀಟುಗಳು ಸೇರಿದಂತೆ ಒಳಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ . ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಮತ್ತು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ .

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular