HomeLatest NewsSHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ 'KSRTC' ಬಸ್...

SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!

ಮಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಮುಡಿಪು ಸ್ಟೇಟ್ ಬ್ಯಾಂಕ್ ಭಾಗದ ಕೆ.ಎಸ್.ಆರ‍್.ಟಿ.ಸಿ ಬಸ್ ನಲ್ಲಿ ಕಂಡಕ್ಟರ್, ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಪ್ರಯಾಣಿಕರೊಬ್ಬರ ಮೊಬೈಲ್ ನಲ್ಲಿ ಈ ವಿಡಿಯೋ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿ ಕಂಡಕ್ಟರ್ ನನ್ನು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆ ಮೂಲದ ಪ್ರದೀಪ್ (40) ವಶಕ್ಕೆ ಪಡೆದಿರುವ ಆರೋಪಿ. ಯುವತಿ ಬಸ್ ನಲ್ಲಿ ನಿದ್ರೆಗೆ ಜಾರಿದ್ದ ವೇಳೆ ಆಕೆ ಪಕ್ಕದಲ್ಲಿಯೇ ನಿಂತಿದ್ದ ಕಂಡಕ್ಟರ್ ಆಕೆಗೆ ಕಿರುಕುಳ ನೀಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular